ದಾವಣಗೆರೆ: ವಸತಿ ಶಾಲೆಗಳಲ್ಲಿ ಖಾಲಿ ಇರುವ 7, 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಅಲ್ಪಸಂಖ್ಯಾತರ ಸೀಟುಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳಲ್ಲಿ ಮತ್ತು ಜಿಲ್ಲಾ ಕಚೇರಿಯಲ್ಲಿ ಜುಲೈ 14 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಎಲ್ಲೆಲ್ಲಿ ಖಾಲಿ‌…?

ಡಾ.ಎ.ಪಿ.ಜೆಅಬ್ದುಲ್ ಕಲಾಂ ವಸತಿ ಶಾಲೆ, ಕೊಂಡಜ್ಜಿ, ಹರಿಹರ ತಾ|| ದಾವಣಗೆರೆ ಜಿಲ್ಲೆ ದೂ.ಸಂ: 9008815296, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಶಾಲೆ, ವಡೆರಹಳ್ಳಿ, 9916828601, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ ದೂ.ಸಂ: 9164855466, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಜಗಳೂರು ತಾ|| ದೂ.ಸಂ: 8197641112 ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಧಿಕಾರಿ ತಿಳಿಸಿದ್ದಾರೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Related Post
Recent Posts