Connect with us

Dvgsuddi Kannada | online news portal | Kannada news online

ದಾವಣಗೆರೆ: ಯುಪಿಎಸ್‍ಸಿ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ಜಿಲ್ಲಾ ಆಡಳಿತದಿಂದ ಸನ್ಮಾನ

IMG 20240417 174718

ದಾವಣಗೆರೆ

ದಾವಣಗೆರೆ: ಯುಪಿಎಸ್‍ಸಿ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ಜಿಲ್ಲಾ ಆಡಳಿತದಿಂದ ಸನ್ಮಾನ

ದಾವಣಗೆರೆ: ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಇವರಿಗೆ ಇಂದು (ಏ. 17) ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ ನೀಡುವ ಮೂಲಕ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಸನ್ಮಾನಿಸಿ ಗೌರವಿಸಿದರು.

ದಾವಣಗೆರೆಯಲ್ಲಿ ಓದಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಾಗಿದೆ. ಯಾವುದೇ ಕೋಚಿಂಗ್ ಕೇಂದ್ರದಲ್ಲಿ ತರಬೇತಿ ಪಡೆಯದೇ ಪುಸ್ತಕಗಳನ್ನು ಓದುವ ಮೂಲಕ ಸ್ವಂತ ಓದಿನಿಂದ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಅತ್ಯುನ್ನತ ರ್ಯಾಂಕ್ ಪಡೆದಿರುವುದಕ್ಕೆ ಹೆಮ್ಮೆಯಿಂದ ಸನ್ಮಾನಿಸಲಾಗುತ್ತಿದೆ ಎಂದ ಜಿಲ್ಲಾಧಿಕಾರಿ, ನಿಮ್ಮ ಸೇವಾ ಅವಧಿಯಲ್ಲಿ ಸಾಧನೆ ಮಾಡಿದವರಿಗೆ ಇದೇ ರೀತಿ ಸನ್ಮಾನಿಸಿ ಗೌರವಿಸುವ ಕೆಲಸ ಮಾಡಿದಲ್ಲಿ ಅವರು ಸಹ ನಿಮ್ಮಂತೆ ಶ್ರಮಪಟ್ಟು ಓದುವ ಮೂಲಕ ಉನ್ನತ ಸ್ಥಾನಕ್ಕೇರುವರು ಎಂದರು.

22 ವರ್ಷದ ಸೌಭಾಗ್ಯ ಬೀಳಗಿಮಠ ಪ್ರೌಢ ಶಿಕ್ಷಣವನ್ನು ದಾವಣಗೆರೆಯ ಜಿಲ್ಲಾಧಿಕಾರಿಗಳ ನಿವಾಸದ ಹತ್ತಿರವಿರುವ ಎಜು ಏಷಿಯಾ ಶಾಲೆಯಲ್ಲಿ ಮತ್ತು ಪಿಯುಸಿಯನ್ನು ಸಿದ್ದಗಂಗಾ ಶಾಲೆಯಲ್ಲಿ ಪೂರೈಸಿ ಧಾರವಾಡದಲ್ಲಿ ಕೃಷಿ ಪದವಿ ಪಡೆದಿರುತ್ತಾರೆ. ಈ ವೇಳೆ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಸೌಭಾಗ್ಯ ಬೀಳಗಿಮಠ ಅವರ ತಂದೆ ಶರಣಯ್ಯಸ್ವಾಮಿ, ತಾಯಿ ಶರಣಮ್ಮ, ಸಹೋದರ, ಮಾರ್ಗದರ್ಶನ ಮಾಡಿದ ಪ್ರೊಫೆಸರ್ ಡಾ; ಅಶ್ವಿನಿ, ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ಅವರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top