ದಾವಣಗೆರೆ: 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏ.20 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಏ.30 ರವರಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ವೆಬ್‍ಸೈಟ್ www.ssp.postmatric.karnataka.gov.in, ಕಾರ್ಯಕ್ರಮದ ವಿವರ, ಹಾಗೂ ಹೆಚ್ಚಿನ ವಿವರಗಳಿಗೆ https://bcwd.karnataka.gov.in ತಂತ್ರಾಂಶ ದೋಷಗಳು ಮತ್ತು ಇತರೆ ಮಾಹಿತಿಗೆ postmetrichelpdesk@karnataka.gov.in ದೂರವಾಣಿ ಸಂಖ್ಯೆ 8050770005/8050770004/ 080-35254757 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



