Connect with us

Dvgsuddi Kannada | online news portal | Kannada news online

ದಾವಣಗೆರೆ; ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Scholarship

ದಾವಣಗೆರೆ

ದಾವಣಗೆರೆ; ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಗಳಲ್ಲಿ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ ಅಥವಾ ಡಿಪ್ಲೊಮಾ ಮತ್ತು ವೃತ್ತಿಪರ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ರಾಜ್ಯ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಿಗಧಿತ ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಶುಲ್ಕ ರಹಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಒಂದನೇ ತರಗತಿಯಿಂದ ಅಂತಿಮ ಪದವಿ ಅಥವಾ ಡಿಪ್ಲೊಮಾವರೆಗೆ ವ್ಯಾಸಂಗ ಮಾಡಿತ್ತಿರುವವರು ಸೆಪ್ಟಂಬರ್ 30 ರೊಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ. ಸಂ. 08182-220925 ಗೆ ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ, ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top