Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Scholarship

ದಾವಣಗೆರೆ

ದಾವಣಗೆರೆ: ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು(ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಪಿ.ಹೆಚ್.ಡಿ ಸಂಶೋಧಗೆ ಕರ್ನಾಟಕ ಡಿ.ಎಸ್.ಟಿ.-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರಬೇಕು.ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೊಬರ್ 30 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಾದ ಬಸವರಾಜ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top