Connect with us

Dvg Suddi-Kannada News

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.14ರ ವರೆಗೆ ವಿಸ್ತರಿಸಿದೆ. ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಯುಕ್ತ ರಾಜ್ಯಾದ್ಯಾಂತ ಲಾಕ್‍ಡೌನ್ ಜಾರಿ ಮಾಡಲಾಗಿತ್ತು, ಹಾಗೂ ತಾಂತ್ರಿಕ ತೊಂದರೆಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಂತ್ರಾಂಶ ತೆರೆದಿರುವುದಿಲ್ಲ. ಆದ್ದರಿಂದ ಕೊನೆಯ ದಿನಾಂಕವನ್ನು ಮಾರ್ಪಡಿಸಿ ಆ.14 ರವರಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಈಗಾಗಲೇ ಕಾನೂನು ಪದವೀಧರ ಶಿಷ್ಯವೇತನ ಪಡೆಯುತ್ತಿರುವ ಅಭ್ಯರ್ಥಿಗಳು ಆನ್‍ಲೈನ್ ನಲ್ಲಿ ನವೀಕರಣ ಮಾಡಿಸಿಕೊಳ್ಳಲು ಸೂಚಿಸಿದೆ. ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.sw.kar.nic.inಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top