ದಾವಣಗೆರೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನದಾವಣಗೆರೆ: ಪ್ರಸಕ್ತ ಸಾಲಿನಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ 9 ಮತು 10 ನೇ ತರಗತಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಸ್ಕಾಲರ್‍ಶಿಪ್ ಪೋರ್ಟಲ್‍ನಲ್ಲಿ ಒನ್‍ಟೈಂ ಪಾಸ್‍ವರ್ಡ್ ಸೃಜನೆ ಮಾಡಿ ನೊಂದಣಿ ಮಾಡಿದ ನಂತರ ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾಂಶದಲ್ಲಿ ಎಸ್‍ಎಸ್‍ಪಿ ಅರ್ಜಿ ಸಲ್ಲಿಸಬೇಕೆಂದು ಚನ್ನಗಿರಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.



