ದಾವಣಗೆರೆ: ಪ್ರಸಕ್ತ ಸಾಲಿನ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಕಾರ್ಯಕ್ರಮದಡಿ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್‍ಎಸ್‍ಪಿ ಪೋರ್ಟಲ್ ತಂತ್ರಾಂಶದಲ್ಲಿ http://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.