ದಾವಣಗೆರೆ: ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನಮಂತ್ರಿ ಶಿಷ್ಯವೇತನಕ್ಕೆ (PMSS) ಅರ್ಜಿಯನ್ನು ಸಲ್ಲಿಸಲು ನ.30 ಕೊನೆಯ ದಿನವಾಗಿ ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಪ್ರಸ್ತುತ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.31 ರವರೆಗೂ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ದೂ.ಸಂ: 08182-220925 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



