ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ 2021-22 ನೇ ಸಾಲಿನ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಏ. 30 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ ಎಂ.ಬಿ.ಬಿ.ಎಸ್, ಎಂ.ಡಿ, ಎಲ್.ಎಲ್.ಬಿ, ಎಲ್.ಎಲ್.ಎಂ ಹಾಗೂ ಇತರೆ ಕೋರ್ಸ್‍ಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ಏ.30 ರವರೆಗೆ ವಿಸ್ತರಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿರುವ ನವೀಕರಣ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಂಜೂರು ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವಿದ್ಯಾರ್ಥಿಗಳಿಗೆ ಒಂದು ತಿಂಗಳ ಒಳಗಾಗಿ ಶುಲ್ಕ ಮರುಪಾವತಿಯನ್ನು ಮಂಜೂರು ಮಾಡಿ, ಆಧಾರ್ ಜೋಡಣೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮುಖಾಂತರ ಜಮೆ ಮಾಡಲಾಗುವುದು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in.xn--nscag5gdfc0a6… ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಯ ವೆಬ್‍ಸೈಟ್ ವಿಳಾಸ: www.bcwd.karnataka.gov.in/ ಇಲಾಖಾ ಸಹಾಯವಾಣಿÂ ಸಂಖ್ಯೆ: 8050770005/8050770004. ಇಮೇಲ್: bcwd.scholarship@karnataka.gov.in ಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



