Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ‘ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ’ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ.

2022-23ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕಡೆಯ ದಿನವಾಗಿದ್ದು, ಹೆಚ್ಚಿನ ವಿವರಗಳು ಮತ್ತು ಅರ್ಜಿ ಸಲ್ಲಿಸಲು ವೆಬ್‍ಸೈಟ್ http://ksteps.karnataka.gov.in ಇಲ್ಲಿ ಭೇಟಿ ನೀಡಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top