Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದವರಾಗಿರಬೇಕು. ವ್ಯಾಸಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದವರಾಗಿರಬೇಕು. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ಆದಾಯ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ ಹಾಗೂ ಇತರೆ ವಿದ್ಯಾರ್ಥಿಗಳಿಗೆ ರೂ.2.00 ಲಕ್ಷ ಮೀರಿರಬಾರದು. ಆಯಾ ವರ್ಷದಲ್ಲಿ ಲಭ್ಯವಿರುವ ಅನುದಾನಕ್ಕೆ ಸೀಮಿತಗೊಳಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.ಆಸಕ್ತರು ಇಲಾಖೆಯ ವೆಬ್‍ಸೈಟ್ https://sevasindhu.karnataka.gov.in ಮೂಲಕ ಅಕ್ಟೋಬರ್ 20 ರೊಳಗಾಗಿ ಸಲ್ಲಿಸಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top