ದಾವಣಗೆರೆ: ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2.00 ಲಕ್ಷಗಳ ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯ ಹೊರತುಪಡಿಸಿ) ಸೇರಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್.24 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ Suvida.karnataka.gov.in ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ವೆಬ್‍ಸೈಟ್ ನುಡಿಗೆ ಬದಲಾವಣೆಗೊಂಡ ಪಠ್ಯ..
https://dbcdc.karnataka.gov.in ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.