ದಾವಣಗೆರೆ: ಶಾಮನೂರು ಶಿವಶಂಕರಪ್ಪ ಶತಾಯುಷಿ ಆಗುತ್ತಾರೆ ಎಂಬ ನಂಬಿಕೆಯಿತ್ತು. ಜಾತ್ಯಾತೀತ, ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆ: ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
ದೇಶ ಕಂಡ ಹಿರಿಯ ಶಾಸಕ
ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗೀ ಸುಧೀರ್ಘ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಜನ್ಮದಿನಾಚರಣೆಯಲ್ಲಿ ಹಾಗೂ ದಾಲ್ ಮಿಲ್ ಉದ್ಘಾಟನೆಯಲ್ಲಿ ನಾನು ಪಾಲ್ಗೊಂಡಿದ್ದೇನು. ಶ್ರೀಯುತರು ಶತಾಯುಷಿಗಳಾಗುತ್ತಾರೆ ಎಂಬ ನಂಬಿಕೆಯಿತ್ತು. ಅವರ ಅಗಲಿಕೆಯಿಂದ ನಾಡಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ತಮ್ಮ ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲರಾಗಿದ್ದರು ಎಂದರು.
ದಾವಣಗೆರೆ: ತಾಳೆ ಬೆಳೆಗೆ ಬೆಂಕಿ ಅವಘಡ; ತಮ್ಮ ಬೆಳೆ ರಕ್ಷಣೆಗೆ ಹೋದ ರೈತ ಸಜೀವ ದಹನ
ವೀರಶೈವ ಮಹಾಸಭಾದ ರಾಷ್ಟ್ರಧ್ಯಕ್ಷರಾಗಿದ್ದಾಗ ಸಂದರ್ಭದಲ್ಲಿ ನನ್ನನ್ನು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನು. ಬಿಜಾಪುರದ ಅಕ್ಕಮಹಾದೇವಿ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜಗದ್ಗುರು ಬಸವಣ್ಣನವರ ಛಾಯಾಚಿತ್ರ ಕಡ್ಡಾಯಗೊಳಿಸುವ ತೀರ್ಮಾನವನ್ನು ಅಭಿನಂದಿಸಲು ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದನ್ನು ಸ್ಮರಿಸಿದರು.
ಅಜಾತಶತ್ರು
ಶಿವಶಂಕರಪ್ಪ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಿಲ್ಲದಿದ್ದರೂ, ಆ ಕ್ಷೇತ್ರದಲ್ಲಿ ಜನಮನ್ನಣೆಗೆ ಪಾತ್ರರಾಗಿದ್ದರಲ್ಲದೇ, ಆರು ಬಾರಿ ಸತತವಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಸದಾ ಚೈತನ್ಯಶೀಲರಾಗಿದ್ದ ಶಾಮನೂರು ಶಿವಶಂಕರಪ್ಪನವರು ಮುಂದಿನ ಚುನಾವಣೆಯಲ್ಲಿಯೂ ಭಾಗವಹಿಸುವ ಹುರುಪನ್ನು ತೋರಿದ್ದರು. ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರುವಾಗಿದ್ದರು ಎಂದರು.

ಕೊಡುಗೈದಾನಿ
ಬಡವರು, ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಲು ಟ್ರಸ್ಟ್ ಮೂಲಕ ನೆರವಾಗುವ ಕೊಡುಗೈದಾನಿಯಾಗಿದ್ದರು. ಪ್ರತಿಯೊಬ್ಬರಿಗೂ ಹುಟ್ಟು ಆಕಸ್ಮಿಕ, ಆದರೆ ಸಾವು ಖಚಿತ, ಈ ನಡುವಿನ ಪಯಣದಲ್ಲಿ ಬದುಕಿನ ಸಾರ್ಥಕತೆ ಕಂಡುಕೊಳ್ಳುವುದು ಮುಖ್ಯ. ದು:ಖದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ನಿಜಕ್ಕೂ ಸಾರ್ಥಕ ಎಂದರು.
ಕೇವಲ ಜವಳಿ ಕೇಂದ್ರವಾಗಿದ್ದ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಬಾಪೂಜಿ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಸಹಸ್ರಾರು ಬದುಕಿಗೆ ದಾರಿದೀಪವಾಗಿದ್ದರು. ಉದ್ಯಮಿಯಾಗೀ, ಕೈಗಾರಿಕೋದ್ಯಮಿಯಾಗೀ, ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾಗಿ, ರಾಜಕಾರಣಿಯಾಗಿ ಸುದೀರ್ಘ ಸೇವೆ ಸಲ್ಲಿಸಿರುವುದು ಶ್ಲಾಘನೀಯ. ಮಹಾನ್ ಚೇತನ ಶಾಮನೂರು ಶಿವಶಂಕರಪ್ಪನವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗ ಹಾಗೂ ಅಭಿಮಾನಿವರ್ಗಕ್ಕೆ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ದಾನ, ಧರ್ಮ, ಸರಳತೆ, ಶಿಸ್ತಿನ ಜೀವನ ನಡೆಸಿ ಅಧಿಕಾರಕ್ಕಿಂತ ಆದರ್ಶ ಮುಖ್ಯವೆಂದು ಸಾರಿದ ಧೀಮಂತ ನಾಯಕ ಡಾ.ಶಾಮನೂರು ಶಿವಶಂಕರಪ್ಪ. ಅವರು 95 ವರ್ಷದ ಇಳಿವಯಸ್ಸಿನಲ್ಲಿಯೂ ಶಾಸಕರಾಗಿ ಜನರ ಸೇವೆ ಸಲ್ಲಿಸಿ ದೇಶದಲ್ಲಿಯೇ ಹಿರಿಯ ಶಾಸಕರೆಂಬ ದಾಖಲೆಯನ್ನು ಸೃಷ್ಠಿ ಮಾಡಿದಂತಹ ಏಕೈಕ ವ್ಯಕ್ತಿಯಾಗಿದ್ದವರು ಡಾ.ಶಾಮನೂರು ಶಿವಶಂಕರಪ್ಪ. ನನ್ನ ಹಾಗೂ ಅವರ ಭಾಂದವ್ಯ ಹೇಗಿತ್ತು ಎಂದರೆ, ಅವರು ಎಷ್ಟು ದಿನ ವಿಧಾನಸಭೆಯಲ್ಲಿದ್ದರು, ಅಷ್ಟು ದಿನ ನಾನು ವಿಧಾನಸಭೆಯಲ್ಲಿ ಸದಸ್ಯನಾಗಿದ್ದೆನು, ಶರಣರ ಗುಣವನ್ನು ಮರಣದಲ್ಲಿ ಕಾಣಬೇಕು ಎಂದು ಹಿರಿಯರು ಹೇಳುತ್ತಾರೆ. ಅದರಂತೆ ಮನುಷ್ಯನ ಬದುಕು ಶಾಶ್ವತವಲ್ಲ, ಆದರೆ ನಾವು ಬಿಟ್ಟು ಹೋಗುವ ಕೆಲಸಗಳು ಶಾಶ್ವತವಾಗಿರುತ್ತವೆ ಎಂಬಂತೆ ಅವರ ಕಾರ್ಯಗಳು ಶಾಶ್ವತವಾಗಿವೆ.

ಅವರ ಶ್ರೀಮಂತಿಕೆಯ ಜತೆಗೆ ಹೃದಯ ಶ್ರೀಮಂತಿಕೆಯನ್ನು ಹೊಂದಿದ್ದ ದೊಡ್ಡ ವ್ಯಕ್ತಿತ್ವ ಅವರದು. ಒಬ್ಬ ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎಂಬುದಕ್ಕಿಂತ, ಎಷ್ಟು ಜನರಿಗೆ ಬದುಕನ್ನು ಬದಲಾವಣೆ ಮಾಡಿದ್ದಾರೆ ಎಂಬುದು ಬಹಳ ಮುಖ್ಯ. ಇದಕ್ಕೆ ಶಾಮನೂರು ಶಿವಶಂಕರಪ್ಪನವರೆ ದೊಡ್ಡ ಉದಾಹರಣೆ ಎಂದ ಅವರು. ಕೋವಿಡ್ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಇಡೀ ದಾವಣಗೆರೆ ಜನರಿಗೆ ಆರೋಗ್ಯವನ್ನು ನೀಡಿದಂತವರು, ಇಡೀ ಭಾರತದಲ್ಲಿ ಯಾರು ಈ ರೀತಿ ಸ್ವಂತ ಹಣದಿಂದ ಜನರ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿರಲಿಲ್ಲ, ಜಾತ್ಯಾತೀತವಾಗಿ ಜನರ ಸೇವೆಯನ್ನು ಸಲ್ಲಿಸಿದವರು ಎಂದರು.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮಾತನಾಡಿ, ದಾವಣಗೆರೆ ಬ್ರ್ಯಾಂಡ್ ಅಂಬಾಸಿಡರ್ ಎಂದು ಪ್ರಸಿದ್ದ ಪಡೆದಿದ್ದ, ಅಜಾತಶತೃ ಎಂದೆ ಕರೆಸಿಕೊಳ್ಳುತ್ತಿದ್ದ ಹಾಗೂ ಜವಳಿ ನಗರವೆಂದೇ ಪ್ರಸಿದ್ದ ಪಡೆದಿದ್ದ ದಾವಣಗೆರೆಯನ್ನು ಬಾಪೂಜಿ ವಿದ್ಯಾ ಸಂಸ್ಥೆ ಮೂಲಕ ವಿದ್ಯಾನಗರಿಯಾಗಿ ಮಾಡಿದವರು ನಮ್ಮ ಪೂಜ್ಯ ತಂದೆ ಶಾಮನೂರು ಶಿವಶಂಕರಪ್ಪನವರು, 6 ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿ ಮತ್ತು ಸಂಸದರಾಗಿ ಸೇವೆ ಸಲ್ಲಿಸದವರು. ಅವರಿಗೆ ಬಡವರ ಬಗ್ಗೆ ವಿಶೇಷ ಕಾಳಜಿ ಇತ್ತು ಕೋವಿಡ್ ಸಂದರ್ಭದಲ್ಲಿ ಅವರು ಕೋವಿಡ್ ಲಸಿಕೆ ಹಾಗೂ ಆಹಾರ ಕಿಟ್ ಗಳನ್ನು ನೀಡಿದರು.
1967 ರೈಸ್ ಮಿಲ್ ಸ್ಥಾಪಿಸಿದರು. ನಂತರ 6 ಸಕ್ಕರೆ ಕಾರ್ಖಾನೆಗಳು ಮತ್ತು ತಮ್ಮ 95 ನೇ ವಯಸ್ಸಿನಲ್ಲಿ ಒಂದು ದಾಲ್ ಮಿಲ್ ಸ್ಥಾಪಿಸಿದರು. ರೈತರು ಮತ್ತು ಕಾರ್ಮಿಕರ ಆರ್ಥಿಕ ಜೀವನ ಹೆಚ್ಚಿಸಿದ್ದು ಅಲ್ಲದೆ ಉದ್ಯೋಗವನ್ನು ಸೃಷ್ಠಿ ಮಾಡಿದರು ಎಂದರು.
ದಿವ್ಯಸಾನ್ನಿಧ್ಯ : ಬಾಳೇಹೊನ್ನುರು ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನದ ಜಗದ್ಗುರು ಶ್ರೀ ಡಾ.ಪ್ರಸನ್ನ ರೇಣುಕ ವೀರಸೋಮೇಶ್ವರ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಂಗಳವರು, ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಜಿಗಳವರು, ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕಾಗಿನೆಲೆ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನ ಮಹಾಸಂಸ್ಥಾನ ಪೀಠದ ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ, ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಮಹಾಸ್ವಾಮೀಜಿಗಳು, ಭಗೀರಥ ಗುರುಪೀಠದ ಶ್ರೀಪುರಷೋತ್ತಮಾನಂದಪುರಿ ಸ್ವಾಮೀಜಿಗಳು, ಕೂಡಲ ಸಂಗಮ ಮಹಾಪೀಠದ ಶ್ರೀ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ, ಕೋಡಿಮಠದ ಡಾ; ಶಿವಾನಂದ ಶಿವಯೋಗಿ, ಪಂಚಮಸಾಲಿ ಪೀಠದ ಯೋಗಗುರು ಶ್ರೀ ವಚನಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಸಾನಿಧ್ಯ ವಹಿಸಿದ್ದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್, ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಹೆಚ್.ಕೆ. ಪಾಟೀಲ್, ವಿಧಾನಸಭೆ ಮುಖ್ಯಸಚೇತಕ ಅಶೋಕ್ ಎಂ ಪಟ್ಟಣ್, ಶಾಸಕರಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಡಿ.ಜಿ. ಶಾಂತನಗೌಡ, ಬಸವರಾಜ್ ವಿ ಶಿವಗಂಗಾ, ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ , ಶ್ರೀ ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಮೆಹಬೂಬ್ ಪಾಷ, ಮಾಜಿ ಸಚಿವರುಗಳಾದ ಎಸ್.ಎ. ರವೀಂದ್ರನಾಥ್, ರೇಣುಕಾಚಾರ್ಯ, ಹೆಚ್. ಆಂಜನೇಯ ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಮಾಡಾಳು ವಿರೂಪಾಕ್ಷಪ್ಪ ಮತ್ತು ಪೂರ್ವ ವಲಯ ಪೊಲೀಸ್ ಮಹಾನೀರಿಕ್ಷಕ ಡಾ; ಬಿ.ಆರ್. ರವಿಕಾಂತೇಗೌಡ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಎಸ್.ಪಿ. ಉಮಾಪ್ರಶಾಂತ್ ಸೇರಿದಂತೆ ಅನೇಕ ಗಣ್ಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಾಸ್ರಾವಿಕವಾಗಿ ಮಾತನಾಡಿದರು. ಶಾಮನೂರು ಕುಟುಂಬದ ಸದಸ್ಯರು ಸೇರಿದಂತೆ ಅಪಾರ ಬಂದುಬಳಗದವರು ಭಾಗವಹಿಸಿದ್ದರು.



