ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪನವರನ್ನು ದಾವಣಗೆರೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಬೆಂಗಳೂರಿನ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಶಾಮನೂರು ಶಿವಶಂಕರಪ್ಪ ಅವರು ಶತಾಯುಷಿಯಾಗಿ ಇನ್ನಷ್ಟು ಕಾಲ ಸಮಾಜವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಅವರಿಗೆ ಕರುಣಿಸಲಿ ಎಂದು ಆಶಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ದಾವಣಗೆರೆಯ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ , ದೂಡಾ ಮಾಜಿ ಅಧ್ಯಕ್ಷ ದೇವರಮನೆ ಶಿವಕುಮಾರ. ಜಯಪ್ರಕಾಶ ಮಾಗಿ. ದೇವರ ಮನೆ ಶಿವರಾಜ್ ಇದ್ದರು.



