ದಾವಣಗೆರೆ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದೇಶ ಮತ್ತು ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ದಾವಣಗೆರೆಯ ಅಣ್ಣಾನಗರದಲ್ಲಿ ಪ್ರದೇಶಾಭಿವೃದ್ಧಿ ಯೋಜನೆಯಡಿ 15 ಲಕ್ಷ ಮೊತ್ತದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ವಿಧಾನಪರಿಷತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ದಾಖಲಿಸಿದೆ. ಜನತೆ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ತರುವ ವಿಶ್ವಾಸವಿದೆ ಎಂದರು.
ಈಗಾಗಲೇ ಬಿಜೆಪಿ ಸರ್ಕಾರ ಜನವಿರೋಧಿ ನೀತಿಗಳಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸುವರ್ಣ ಯುಗಕ್ಕೆ ಮರುಳಲಿದೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ಸದಸ್ಯೆ ಮೀನಾಕ್ಷಿ ಜಗದೀಶ್ ಉಪಸ್ಥಿತರಿದ್ದರು.