Connect with us

Dvgsuddi Kannada | online news portal | Kannada news online

ಮೈಸೂರಿನ ಸುತ್ತೂರು ಮಠದಲ್ಲಿ 12 ಕೋಟಿ ವೆಚ್ಚದಲ್ಲಿ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ನಿರ್ಮಾಣ; ನಾಳೆ ಗೃಹ ಸಚಿವ ಅಮಿತ್ ಶಾ ಉದ್ಘಾಟನೆ

ದಾವಣಗೆರೆ

ಮೈಸೂರಿನ ಸುತ್ತೂರು ಮಠದಲ್ಲಿ 12 ಕೋಟಿ ವೆಚ್ಚದಲ್ಲಿ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ನಿರ್ಮಾಣ; ನಾಳೆ ಗೃಹ ಸಚಿವ ಅಮಿತ್ ಶಾ ಉದ್ಘಾಟನೆ

ದಾವಣಗೆರೆ: ಮೈಸೂರಿನ ಸುತ್ತೂರು ಮಠದಲ್ಲಿ 12 ಕೊಟಿ ವೆಚ್ಚದಲ್ಲಿ ನಿರ್ಮಿಸಿರುವ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನಾಳೆ (ಫೆ.11) ಮಧ್ಯಾಹ್ನ 12 ಗಂಟೆಗೆ ಉದ್ಘಾಟಿಸಲಿದ್ದಾರೆ.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಇದಕ್ಕೂ ಮುನ್ನ ಕಾರ್ಯಕ್ರಮ ಇಂದು (ಫೆ.10) ನಿಗದಿಯಾಗಿತ್ತು. ಆದರೆ, ಸಂಸತ್ ಅಧಿವೇಶನ ಮುಂದುವರಿದ ಕಾರಣ ಒಂದು ದಿನ ಮುಂದೂಡಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರೊಂದಿಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಕೂಡ ಪಾಲ್ಗೊಳ್ಳುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬ 12 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಿಸಿದೆ. 4 ಮಹಡಿಗಳ ಈ ಅತಿಥಿಗೃಹವು 50 ಕೊಠಡಿಗಳನ್ನು ಹೊಂದಿದ್ದು, 700 ಜನರಿಗೆ ವಸತಿ ಸೌಲಭ್ಯ ಕಲ್ಪಿಸಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top