ದಾವಣಗೆರೆ: ಶಾಸಕ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದರು.
ನಂತರ ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳವರನ್ನು ಭೇಟಿ ಮಾಡಿ ವೀರಶೈವ ಲಿಂಗಾಯತ ಸಮಾಜದ ಸಂಘಟನೆಯ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸನ್ನ, ರಾಜ್ಯ ಅಧ್ಯಕ್ಷ ಎನ್.ತಿಪ್ಪಣ್ಣ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತಿತರರಿದ್ದರು.



