ದಾವಣಗೆರೆ: 2024-25 ನೇ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸಲು ಅರ್ಹ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾರು ಅರ್ಹರು.?
ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಕುರಿ ಮೇಕೆಗಳನ್ನು ಹೊಂದಿರುವ ಸಂಚಾರಿ ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಪಶು ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕು.
ಎಲ್ಲಿ ಸಂಪರ್ಕಿಸಬೇಕು..?
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಚಿಕಿತ್ಸಾಲಯ, ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು, ದಾವಣಗೆರೆ ಇವರನ್ನು ಸಂಪರ್ಕಿಸಲು ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.