Connect with us

Dvgsuddi Kannada | online news portal | Kannada news online

ದಾವಣಗೆರೆ: ಕುರಿ, ಮೇಕೆ ಸಾಕುವ ಪ್ಲ್ಯಾನ್ ಇದ್ಯಾ..? ಇಲ್ಲಿದೆ ಪಶು ಇಲಾಖೆಯಿಂದ ಎರಡು ದಿನ ತರಬೇತಿ

ದಾವಣಗೆರೆ

ದಾವಣಗೆರೆ: ಕುರಿ, ಮೇಕೆ ಸಾಕುವ ಪ್ಲ್ಯಾನ್ ಇದ್ಯಾ..? ಇಲ್ಲಿದೆ ಪಶು ಇಲಾಖೆಯಿಂದ ಎರಡು ದಿನ ತರಬೇತಿ

ದಾವಣಗೆರೆ; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಮೇ 15, 16 ರಂದು ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ನೊಂದಿಗೆ ತರಬೇತಿಗೆ ಹಾಜರಾಗಬೇಕು.

ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. ಸಂ 08192-233787ಗೆ ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top