ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆ.16, 17 ರಂದು ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಹೆಚ್ಚಿನ ಮಾಹಿತಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ
ಕೇಂದ್ರ ದಾವಣಗೆರೆ ದೂ. 08192-233787 ಗೆ
ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿ ಚಂದ್ರಶೇಖರ ಸುಂಕದ್ ತಿಳಿಸಿದ್ದಾರೆ.