ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಶನಿವಾರ ಜಿಲ್ಲಾಡಳಿತ ಭವನದಲ್ಲಿ ಶಿವಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿ.ಪಂ. ಉಪಕಾರ್ಯದರ್ಶಿ ಆನಂದ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್, ಮರಾಠ ಸಮಾಜದ ಅಧ್ಯಕ್ಷ ಮಾಲತೇಶ್‍ರಾವ್ ಜಾಧವ್, ಗೌರವಾಧ್ಯಕ್ಷ ಯಶವಂತ್‍ರಾವ್ ಜಾಧವ್, ಖಜಾಂಚಿ ಗೋಪಾಲ್‍ರಾವ್ ಮಾನೆ, ವೈ ಮಲ್ಲೇಶ್, ಹೆಚ್.ಎಸ್. ಗಣೇಶ್‍ರಾವ್, ಪರಶುರಾಮ್ ಸಾವಂತಿ, ಕೃಷ್ಣೋಜಿ ಸಾವಂತಿ, ಸೋಮಶೇಖರ್, ಬಸವರಾಜ್ ಮಾನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.