Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿವಾಜಿ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಪ್ರೇರಣಾದಾಯ; ಶಾಮನೂರು ಶಿವಶಂಕರಪ್ಪ

IMG 20240219 202434

ದಾವಣಗೆರೆ

ದಾವಣಗೆರೆ: ಶಿವಾಜಿ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಪ್ರೇರಣಾದಾಯ; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು, ಕ್ರಮೇಣ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದವರು ಶಿವಾಜಿ. ಇವರ ಶೌರ್ಯ, ಸಾಹಸ ರಾಷ್ಟ್ರಭಕ್ತಿ ಆಡಳಿತ ಎಂದೆಂದಿಗೂ ಪ್ರೇರಣಾದಾಯಕ ಎಂದು ಮಾಜಿ ಸಚಿವ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘ ಇವರ ಸಹಯೋಗದಲ್ಲಿ ನಗರದ ಕೃಷ್ಣಾಭವಾನಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತ್ಸೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು ಮಹಾರಾಷ್ಟ್ರದ ಪುಣೆಯ ಹತ್ತಿರವಿರುವ ಶಿವನೇರಿ ಎಂಬಲ್ಲಿ ಫೆ.19 ರಂದು ಮರಾಠಾ ಕುಟುಂಬದಲ್ಲಿ ಶಿವಾಜಿ ಜನಿಸಿದರು. ಇವರ ಜನ್ಮದಿನ ಸಾಕಷ್ಟು ಜನಪ್ರಿಯವಾಗಿದೆ. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಮುಖ್ಯ ಪಾತ್ರವಹಿಸಿದರು. ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಸಮಾಜದ ಉದ್ದಾರಕ್ಕಾಗಿ ಹೋರಾಡಲಿಲ್ಲ, ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹೋರಾಟ ಮಾಡಿದ್ದರು.

ಮೊಘಲರ ವಿರುದ್ಧ ಅನೇಕ ಯುದ್ಧಗಳನ್ನು ಮಾಡುವ ಮೂಲಕ ಅವರನ್ನು ಸೋಲಿಸಿದ ಮರಾಠ ಕೀರ್ತಿ ಮರಾಠ ಚಕ್ರವರ್ತಿ ಎಂದು ಗುರುತಿಸಿಕೊಂಡವರು. ಇಂತಹ ವiಹಾನ್ ಯೋಧನಾ ಜಯಂತಿಯನ್ನು ಸರ್ಕಾರವು ಆಚರಿಸುತ್ತಿದ್ದು ಇದು ನಮಗೆ ಸಂತೋಷದ ವಿಷಯವಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರಿನ್ ಭಾನು ಎಸ್ ಬಳ್ಳಾರಿ, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಾನಗರಪಾಲಿಕೆ ಮಹಾಪೌರರಾದ ವಿನಾಯಕ ಪೈಲ್ವಾನ್, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಿ.ಮಾಲತೇಶರಾವ್ ಜಾಧವ್, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಗೌರವಾಧ್ಯಕ್ಷರಾದ ಯಶವಂತರಾವ್ ಜಾಧವ್, ಖಜಾಂಚಿ ಗೋಪಾಲರಾವ್ ಮಾನೆ, ಕ್ಷತ್ರಿಯ ಕಾರ್ಯದರ್ಶಿ ಯಲ್ಲಪ್ಪ ಢಮಾಳೆ, ಶಹಾಜಿ ಮಹಾರಾಜ ಭೋಸ್ಲೆ ಅಭಿವೃದ್ಧಿ ಸ್ಮಾರಕ ಸಮಿತಿಯ ಅಧ್ಯಕ್ಷರು ವೈ.ಮಲ್ಲೇಶ್, ಜೀಜಾಮಾತಾ ಮಹಿಳಾ ಮಂಡಳಿ ಅಧ್ಯಕ್ಷರು ಗೌರಬಾಯಿ ಮೋಹಿತೆ , ಮಹಾನಗರ ಪಾಲಿಕೆಯ ಉಪ ಮಹಾಪೌರರು ಗಾಯಿತ್ರಿಬಾಯಿ ಖಂಡೋಜಿರಾವ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ರವಿಚಂದ್ರ, ಇನ್ನಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top