ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಬೆಂಬಲಿಗರು ಆಗಸ್ಟ್ ನಲ್ಲಿ ಸಿದ್ದರಾಮಯ್ಯ ಅವರ 75 ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ವಿವಿಧ ಜಿಲ್ಲೆಯಲ್ಲಿ ಕಾರ್ಯಕ್ರಮ ಯೋಜಿಸಿದ್ದಾರೆ.
ಆಗಸ್ಟ್ 3ರಂದು ಸಿದ್ದರಾಮಯ್ಯ-75 ಅಭಿನಂದನಾ ಸಮಿತಿಯಿಂದ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಆಗಸ್ಟ್ ಮೂರರಂದು ನನ್ನ ಹಿತೈಷಿಗಳು ಆಯೋಜಿಸಿರುವ ನನ್ನ 75 ನೇ ವರ್ಷದ ಹುಟ್ಟು ಹಬ್ಬದ ಸಮಾರಂಭದಲ್ಲಿ ನಮ್ಮೆಲ್ಲರ ಪ್ರೀತಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಭಾಗವಹಿಸಲಿದ್ದಾರೆ. ನಮ್ಮ ಆಹ್ವಾನವನ್ನು ಒಪ್ಪಿಕೊಂಡ ರಾಹುಲ್ ಗಾಂಧಿಯವರ ಪ್ರೀತಿ-ಅಭಿಮಾನಕ್ಕೆ ನಾನು ಅಭಾರಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆಗಸ್ಟ್ ಮೂರರಂದು ನನ್ನ ಹಿತೈಷಿಗಳು ಆಯೋಜಿಸಿರುವ ನನ್ನ ೭೫ನೇ ವರ್ಷದ ಹುಟ್ಟು ಹಬ್ಬದ ಸಮಾರಂಭದಲ್ಲಿ ನಮ್ಮೆಲ್ಲರ ಪ್ರೀತಿಯ ಕಾಂಗ್ರೆಸ್ ನಾಯಕರಾದ @RahulGandhi ಅವರು ಭಾಗವಹಿಸಲಿದ್ದಾರೆ.
ನಮ್ಮ ಆಹ್ವಾನವನ್ನು ಒಪ್ಪಿಕೊಂಡ
ರಾಹುಲ್ ಗಾಂಧಿಯವರ ಪ್ರೀತಿ-ಅಭಿಮಾನಕ್ಕೆ ನಾನು ಆಭಾರಿ. pic.twitter.com/QCU72qP2Yg— Siddaramaiah (@siddaramaiah) June 29, 2022
ಹಿರಿಯ ಕಾಂಗ್ರೆಸ್ ನಾಯಕರಾದ ಆರ್.ವಿ.ದೇಶಪಾಂಡೆ, ಎಚ್.ಸಿ.ಮಹದೇವಪ್ಪ ಮತ್ತು ಸಿದ್ದರಾಮಯ್ಯ ಅವರ ಆಪ್ತರು ಇದರಲ್ಲಿ ಭಾಗಿಯಾಗಿದ್ದಾರೆ. ದೊಡ್ಡ ಜನಸಮೂಹವನ್ನು ಒಟ್ಟುಗೂಡಿಸುವ ಮೂಲಕ ಸಿದ್ದರಾಮಯ್ಯ ಶಕ್ತಿಯ ಪ್ರದರ್ಶನ ಎನ್ನಲಾಗುತ್ತಿದೆ.
ಸೆಪ್ಟೆಂಬರ್ 3ರವರೆಗೆ, ಪ್ರತಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ದತೆ ನಡೆಸಲಾಗಿದ್ದು, ಸಿದ್ದರಾಮಯ್ಯ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಲಿದ್ದಾರೆ.