ದಾವಣಗೆರೆ: ಕೃಷಿ ಇಲಾಖೆ, ದಾವಣಗೆರೆ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಇತರೆ ರೈತ ಸಂಬಂಧಿ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಡಿ, ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ರಾಜ್ಯಮಟ್ಟದ ನ್ಯೂಟ್ರಿ ಸಿರಿಧಾನ್ಯ ಮೇಳವನ್ನು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ರೈತರ ಅನುಕೂಲಕ್ಕೆಂದು ನ್ಯೂಟ್ರಿ ಸಿರಿಧಾನ್ಯಗಳ 20 ಕ್ಕೂ ಹೆಚ್ಚು ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆದು ವಿವಿಧ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ರೈತರುಗಳು, ನಾಗರಿಕ ಬಂಧುಗಳು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



