ದಾವಣಗೆರೆ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ “ವಿಶ್ವ ಕೌಶಲ್ಯ ಸ್ಪರ್ಧೆ” ಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಯಲ್ಲಿ ವಿವಿಧ 57 ಕೌಶಲ್ಯಗಳಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.
ಈ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವುದು. ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ 2024ರಲ್ಲಿ ಫ್ರಾನ್ಸ್ ನ ಲಿಯೋನ್ ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ದಿನಾಂಕ :07.01.2024 ರೊಳಗೆ ಇಲ್ಲಿ ನೀಡಿರುವ ವೆಬ್‍ಸೈಟ್‍ನಲ್ಲಿ www.skillindiadigital.gov.in ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ.