ದಾವಣಗೆರೆ: ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಮೇ.21 ರಂದು ಶನಿವಾರ ಬೆ.10.30ಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.