ದಾವಣಗೆರೆ: ಶಬರಿಮಲೆ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ರಾಜ್ಯದ ಹುಬ್ಬಳ್ಳಿಯಿಂದ ಕೇರಳದ ಕೊಟ್ಟಾಯಂ ನಿಲ್ದಾಣಕ್ಕೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಈ ರೈಲು ಮೂರು ತಿಂಗಳು ರೈಲು ಸಂಚರಿಸಲಿದೆ.
ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.
ರೈಲು ಸಂಖ್ಯೆ 07371 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ. ರೈಲು ಸಂಖ್ಯೆ 07372 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.
ವಿಶೇಷತೆ ಏನು..?: 2 ಎಸಿ ಟೈಯರ್ , 2 ಎಸಿ ತ್ರಿ ಟೈಯರ್, 6 ಸ್ಲೀಪರ್ ಕ್ಲಾಸ್, 6 ಜನರಲ್ ಸೆಕೆಂಡ್ ಕ್ಲಸ್ ಮತ್ತು 2 ಎಸ್ಎಲ್ಆರ್ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.
ವಾರಕ್ಕೊಮ್ಮೆ ವಿಶೇಷ ರೈಲು
- ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ
- ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ
- ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ
ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ..?
- ದಾವಣಗೆರೆಗೆ ಪ್ರತಿ ಮಂಗಳವಾರ ಸಂಜೆ 5.20 (17.20) ಹುಬ್ಬಳ್ಳಿಯಿಂದ ಬರಲಿದ್ದು, 5.22 ಕ್ಕೆ ಹೊರಡಲಿದೆ
- ಕೊಟ್ಟಾಯಂನಿಂದ ಹೊರಟ ರೈಲು ಪ್ರತಿ ಬುಧವಾರ ಬೆಳಗ್ಗೆ ಬೆಳಗ್ಗೆ 9.03 ಕ್ಕೆ ದಾವಣಗೆರೆ ತಲುಪಿ, 9.05ಕ್ಕೆ ಹೊರಡಲಿದೆ.
ಎಲ್ಲೆಲ್ಲಿ ನಿಲ್ದಾಣ..?:ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಅಲುವ, ಎರ್ನಾಕುಲಂ ಟೌನ್, ಎಟ್ಟುಮನೂರ್ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಆದ www.enquiry.indianrail.gov.in ಗೆ ಅಥವಾ NTES ಆಯಪ್ ತಿಳಿದುಕೊಳ್ಳಬಹುದು.