ಪ್ರಮುಖ ಸುದ್ದಿ
ಶಬರಿಮಲೆ ಭಕ್ತರಿಗೆ ಸಿಹಿ ಸುದ್ದಿ; ಹುಬ್ಬಳ್ಳಿಯಿಂದ ಮೂರು ತಿಂಗಳು ವಿಶೇಷ ರೈಲು; ಎಲ್ಲೆಲ್ಲಿ ನಿಲ್ಲಲಿದೆ ಈ ರೈಲು; ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ ..?

ದಾವಣಗೆರೆ: ಶಬರಿಮಲೆ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ರಾಜ್ಯದ ಹುಬ್ಬಳ್ಳಿಯಿಂದ ಕೇರಳದ ಕೊಟ್ಟಾಯಂ ನಿಲ್ದಾಣಕ್ಕೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಈ ರೈಲು ಮೂರು ತಿಂಗಳು ರೈಲು ಸಂಚರಿಸಲಿದೆ.
ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.
ರೈಲು ಸಂಖ್ಯೆ 07371 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ. ರೈಲು ಸಂಖ್ಯೆ 07372 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.
ವಿಶೇಷತೆ ಏನು..?: 2 ಎಸಿ ಟೈಯರ್ , 2 ಎಸಿ ತ್ರಿ ಟೈಯರ್, 6 ಸ್ಲೀಪರ್ ಕ್ಲಾಸ್, 6 ಜನರಲ್ ಸೆಕೆಂಡ್ ಕ್ಲಸ್ ಮತ್ತು 2 ಎಸ್ಎಲ್ಆರ್ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.
ವಾರಕ್ಕೊಮ್ಮೆ ವಿಶೇಷ ರೈಲು
ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ..?
ಎಲ್ಲೆಲ್ಲಿ ನಿಲ್ದಾಣ..?:ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಅಲುವ, ಎರ್ನಾಕುಲಂ ಟೌನ್, ಎಟ್ಟುಮನೂರ್ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಆದ www.enquiry.indianrail.gov.in ಗೆ ಅಥವಾ NTES ಆಯಪ್ ತಿಳಿದುಕೊಳ್ಳಬಹುದು.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಸತತ 23 ದಿನ ಏರಿಕೆ ಬಳಿಕ ದಿಢೀರ್ ಕುಸಿತ...
ಈ ರಾಶಿಯವರು ಯಾವುದಾದರೂ ಒಂದು ಮೂಲದಿಂದ ಬೃಹತ್ ಪ್ರಮಾಣದ ಧನ ಸಂಪಾದನೆ, ಶುಕ್ರವಾರದ ರಾಶಿ ಭವಿಷ್ಯ 25 ಏಪ್ರಿಲ್ 2025 ಸೂರ್ಯೋದಯ...
ದಾವಣಗೆರೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಸೂಚಿಸಿರುವಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳೊಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು...
ಈ ರಾಶಿಯವರು ಕೃಷಿ ಮಾಡುತ್ತಾ ರಿಯಲ್ ಎಸ್ಟೇಟ್, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮತ್ತು ಮೇಕೆ ಸಾಕಾಣಿಕೆಗಳಿಂದ ಡಬಲ್ ಲಾಭ. ಗುರುವಾರದ ರಾಶಿ...
ಈ ರಾಶಿಯವರು ಸಂಗಾತಿಯ ಪರವಾಗಿ ನಿಲುವುಗಳನ್ನು ಬದಲಾಯಿಸಿಕೊಳ್ಳುವುದು ಅಷ್ಟೊಂದು ಸುಲಭವಲ್ಲ, ಬುಧವಾರ ರಾಶಿ ಭವಿಷ್ಯ 23 ಏಪ್ರಿಲ್ 2025 ಸೂರ್ಯೋದಯ –...