ದಾವಣಗೆರೆ: ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಯುವಕರೊಬ್ಬರ 75 ಸಾವಿರ ಮೌಲ್ಯದ ಐ ಪೋನ್ ಕಳವು ಆಗಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸರು ಮಾಹಿತಿ ನೀಡಿದ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಜ.5 ರಂದು ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಯುವಜನಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವಕ, 75 ಸಾವಿರ ಮೌಲ್ಯದ ಐ ಪೋನ್ ಅನ್ನು ಬಾಪೂಜಿ ಸಮುದಾಯ ಭವನದಲ್ಲಿ ಕಳೆದುಕೊಂಡಿದ್ದರು. ಈ ಬಗ್ಗೆ ಸ್ಥಳದಲ್ಲಿಯೇ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ತಿಳಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾ್ ಪಿಎಸ್ ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಪ್ರವೀಣ್ , ಶಾಂತರಾಜ್ ರವರನ್ನು ಒಳಗೊಂಡ ತಂಡ ಅನುಮಾನಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದು, ನಂತರ ಸಿಸಿಟಿವಿ ಪರಿಶೀಲನೆ ಮಾಡಿ ಕಳೆದುಹೋಗಿದ್ದ ಮೊಬೈಲ್ ಅನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರ ಕ್ಷಿಪ್ರ ಕಾರ್ಯಕ್ಕೆ ಮೊಬೈಲ್ ವಾರಸುದಾರರು ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೂ ಹಾಗು ಜಿಲ್ಲಾ ಪೊಲೀಸ್ ಗೆ ಧನ್ಯವಾದ ತಿಳಿಸಿದ್ದಾರೆ.