Connect with us

Dvgsuddi Kannada | online news portal | Kannada news online

ದಾವಣಗೆರೆ: ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ; ಫೆ.17 ಕೊನೆಯ‌ ದಿನ -ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ

ದಾವಣಗೆರೆ: ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ; ಫೆ.17 ಕೊನೆಯ‌ ದಿನ -ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ: 2019ರ ಏಪ್ರಿಲ್ 1ರ ನಂತರ ನೋಂದಾಯಿಸಿದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ (ಎಚ್ ಎಸ್ ಆರ್ ಪಿ) ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ 6,16,353 ಖಾಸಗಿ ಹಾಗೂ ಸರ್ಕಾರಿ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಬೇಕಾಗಿದೆ. ಇದರಿಂದ ಅಪರಾಧಿಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸುವ ನಕಲಿ ನೋಂದಣಿ ಸಂಖ್ಯೆಗಳನ್ನು ತಡೆಗಟ್ಟಬಹುದು ಮತ್ತು ಸಂಚಾರ‌ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ ಎಂದರು.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್‍ಲೈನ್ ವೆಬ್‍ಸೈಟ್ www.siam.in hsrp karnataka book my hsrp ಮತ್ತು book my hsrp ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು.
ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸóರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೆ.ಎಸ್.ಆರ್.ಟಿ.ಸಿ ಡಿ.ಸಿ ಶ್ರೀನಿವಾಸ್ ಮಾತಾನಾಡಿ ದಾವಣಗೆರೆ ಘಟಕದ 56 ಕೆ.ಎಸ್.ಆರ್.ಟಿ ಸಿ ಬಸ್ಸುಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲಾಗಿದ್ದು, ಬಾಕಿಯಿರುವ 323 ಸರ್ಕಾರಿ ಸಾರಿಗೆ ಬಸ್ಸುಗಳಿಗೆ ಶೀಘ್ರವೇ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಮಾಲೀಕರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್‍ಕುಮಾರ್ ಸಂತೋಷ್, ಆರ್.ಟಿ.ಒ ಪ್ರಮತೇಶ, KSRTC, ಸ್ಮಾರ್ಟ್ ಸಿಟಿ, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಖಾಸಗಿ ಬಸ್, ಆಟೋ ಮಾಲಿಕರ ಹಾಗೂ ಚಾಲಕರ, ಇತರೆ ಲಾರಿ ಸಂಘಗಳ ಪದಾಧಿಖಾರಿಗಳು ಹಾಗೂ ವಾಹನ ಮಾರಾಟಗಾರರು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top