Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯ ಎಲ್ಲ ಎಟಿಎಂಗಳಲ್ಲಿ ಸಿಸಿಟಿವಿ, ಸೆಕ್ಯೂರಿಟಿ ಗಾರ್ಡ್ ವ್ಯವಸ್ಥೆ ಮಾಡುವುದು ಕಡ್ಡಾಯ; ಪೊಲೀಸ್ ಇಲಾಖೆ ಸೂಚನೆ

ದಾವಣಗೆರೆ

ದಾವಣಗೆರೆ: ಜಿಲ್ಲೆಯ ಎಲ್ಲ ಎಟಿಎಂಗಳಲ್ಲಿ ಸಿಸಿಟಿವಿ, ಸೆಕ್ಯೂರಿಟಿ ಗಾರ್ಡ್ ವ್ಯವಸ್ಥೆ ಮಾಡುವುದು ಕಡ್ಡಾಯ; ಪೊಲೀಸ್ ಇಲಾಖೆ ಸೂಚನೆ

ದಾವಣಗೆರೆ: ಎಲ್ಲ ಬ್ಯಾಂಕ್ ಗಳ ಮುಖ್ಯಸ್ಥರುಗಳು 24*7 ಕಾರ್ಯ ನಿರ್ವಹಿಸುವ ಎಟಿಎಂಗಳಲ್ಲಿ ಕಡ್ಡಾಯವಾಗಿ ಉತ್ತಮ ಗುಣಮಟ್ಟದ ಸಿಸಿಟಿವಿ ಮತ್ತು 24*7 ಸೆಕ್ಯೂರಿಟಿ ಗಾರ್ಡ್ ವ್ಯವಸ್ಥೆ ಮಾಡುವುದು ಕಡ್ಡಾಯವಾಗಿದೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್ಪಿ ಉಮಾ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಟಿಎಂ ಗಳ ಭದ್ರತೆ ಸಂಬಂಧ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಜಿಲ್ಲೆಯಲ್ಲಿನ ಎಟಿಎಂ ಗಳ ಭದ್ರತೆ ಸಂಬಂಧ ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

ಸಿಸಿಟಿವಿ ಒಳಗಡೆ ಹಾಕುವದರ ಜೊತೆಗೆ ಹೊರಭಾಗದಲ್ಲಿ ಹಾಗೂ ಎಟಿಎಂ ಮುಂದೆ ಸಂಚರಿಸುವವರು ಕಾಣುವಂತೆ ಸಿಸಿಟಿವಿಗಳನ್ನು ಆಳವಡಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಬ್ಯಾಂಕ್ ಗಳಲ್ಲಿ ಒಳಗಡೆ ಹೊರಗಡೆ ಸಿಸಿಟಿವಿ ವ್ಯವಸ್ಥೆ ಮಾಡಬೇಕು ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸುತ್ತಿರಬೇಕು. ಬ್ಯಾಂಕ್ ಗಳಲ್ಲಿ ಅಲರಾಂ (ಎಚ್ಚರಿಕೆ ಘಂಟೆ) ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸುತ್ತಿರಬೇಕು ತಿಳಿಸಿದರು.

ಬ್ಯಾಂಕುಗಳಿಗೆ ಬರುವ ಸಾರ್ವಜನಿಕರಲ್ಲಿ ಅನುಮಾನಸ್ಪದ ವ್ಯಕ್ತಿಗಳು ಯಾರಾದರೂ ಕಂಡು ಬಂದರೆ ಕೂಡಲೇ ಅವರ ಮೇಲೆ ನಿಗಾ ವಹಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಬ್ಯಾಂಕ್ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗಳೊಂದಿಗೆ ಸಂಪರ್ಕದಲ್ಲಿರಬೇಕು. ಬ್ಯಾಂಕ್ ಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಅವಶ್ಯಕ ಸಹಕಾರ ನೀಡಬೇಕು. ಬ್ಯಾಂಕ್ ಗಳಿಗೆ ಬರುವ ಹಿರಿಯ ನಾಗರೀಕರಿಗೆ ಹಾಗೂ ಹಣ ತೆಗೆದುಕೊಂಡು ಹೋಗುವ ಗ್ರಾಹಕರಿಗೆ Attention Diversion ಮಾಡಿ ಹಣ ಲಪಟಾಯಿಸುವ ಸಾಧ್ಯತೆ ಇರುತ್ತದೆ ಆಗಾಗಿ ಅವರುಗಳಿಗೆ ಹಣದ ಭಧ್ರತೆ ಬಗ್ಗೆ ಸೂಕ್ತ ತಿಳುವಳಿಕೆ ನೀಡಬೇಕು ಹಾಗೂ ಬ್ಯಾಂಕ್ ಗಳ ಒಳಗಡೆ ಹೊರಗಡೆ ಗಾರ್ಡ್ ವ್ಯವಸ್ಥೆ ಮಾಡಬೇಕು.

ಎಲ್ಲಾ ಬ್ಯಾಂಕ್ ಗಳು ತಮ್ಮ ತಮ್ಮ ಬ್ಯಾಂಕ್ ಚೆಸ್ಟ್ ಗಳು ಇರುವಲ್ಲಿ ಸೂಕ್ತ ಭಧ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ – ಒಳಗೂ ಹೊರಗೂ ಉತ್ತಮ ಗುಣ ಮಟ್ಟದ ಸಿಸಿಟಿವಿ ವ್ಯವಸ್ಥೆ, 24*7 ಗಾರ್ಡ್ ವ್ಯವಸ್ಥೆ, ಬ್ಯಾಕ್ ಚೆಸ್ಟ್ ಸುತ್ತ ಭಧ್ರತಾ ವ್ಯವಸ್ಥೆ ಮಾಡಬೇಕು.ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬ್ಯಾಂಕ್ ಗಳು ಸಾರ್ವಜನಿಕರಿಗೆ ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸೈಬರ್ ವಂಚನೆ ಪ್ರಕರಣಗಳ ತನಿಖೆ ಸಮಯದಲ್ಲಿ ಪೊಲೀಸರಿಗೆ ವಿಳಂಬ ಮಾಡದೇ ಸಹಕರಿಸಬೇಕು. ಸೈಬರ್ ವಂಚನೆ ಪ್ರಕರಣಗಳಲ್ಲಿ ನೊಂದ ವ್ಯಕ್ತಿಗಳಿಗೆ ಅಲೆದಾಡಿಸದೇ ಅವರುಗಳಿಗೆ ಕೂಡಲೇ ಅವಶ್ಯಕ ಸಹಾಯ ಮಾಡುವಲ್ಲಿ ಕಾರ್ಯ ಪ್ರವೃತ್ತರಾಗಬೇಕುಎಂದು ತಿಳಿಸಲಾಯಿತು.

ಸೈಬರ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೈಬರ್ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಸೈಬರ್ ವಂಚನೆ ಪ್ರಕರಣಗಳಿಗೆ ಸಾರ್ವಜನಿಕರು ಬಲಿಯಾಗದಂತೆ ಜಾಗೃತಿ ಮೂಡಿಸಬೇಕು ಹಾಗೂ ಸೈಬರ್ ವಂಚನೆ ಪ್ರಕರಣಗಳಿಗೆ ಒಳಗಾದ ಸಾರ್ವಜನಿಕರಿಗೆ ಅವಶ್ಯಕ ನೆರವು ನೀಡುವುದು ಹಾಗೂ ಸದರಿ ಪ್ರಕರಣಗಳ ತನಿಖೆಗೆ ದಾಖಲೆಗಳು ಸೇರಿದಂತೆ ಅವಶ್ಯಕ ಸಹಕಾರ ನೀಡುವ ಬಗ್ಗೆ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಲಾಯಿತು.

ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಪಕ ಪ್ರಕಾಶ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ ಕುಮಾರ ಎಂ ಸಂತೋಷ, ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ ಬಿ ಎಸ್, ಪೊಲೀಸ್ ನಿರೀಕ್ಷಕ ಗುರುಬಸವರಾಜ, ಇಮ್ರಾನ್ ಬೇಗ್, ಸುರೇಶ್ ಸಗರಿ, ಪಿ ಪ್ರಸಾದ್, ರುದ್ರಪ್ಪ ಎಲ್., ಕಿರಣ್ ಕುಮಾರ್, ಮಲ್ಲಮ್ಮ ಚೌಬೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಕೆನರಾ ಬ್ಯಾಂಕ್, ಎಸ್ ಬಿ ಐ ಬ್ಯಾಂಕ್ ವ್ಯವಸ್ಥಾಪಕರುಗಳು ಸೇರಿದಂತೆ ಜಿಲ್ಲೆಯ ವಿವಿಧ ಬ್ಯಾಂಕುಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top