ದಾವಣಗೆರೆ: ಇನ್ಮುಂದೆ ಯಾರೇ ಸಂಚಾರಿ ನಿಯಮ ಉಲ್ಲಂಘಿಸಿದರೂ ಮನೆಗೆ ದಂಡದ ನೋಟಿಸ್ ಬರುತ್ತದೆ ಎಂದು ಎಸ್ ಪಿ ಸಿ.ಬಿ.ರಿಷ್ಯಂತ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಸ್ಮಾರ್ಟ್ ಸಿಟಿ, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ನಗರದಲ್ಲಿ ಸಂಚಾರಿ ವ್ಯವಸ್ಥೆಯಲ್ಲಿ ಸಿಟಿ ಸರ್ವೆಲೆನ್ಸ್ ಸಿಸ್ಟಮ್ ಅನ್ನು ಜಾರಿಗೆ ತಂದಿದೆ. ನಗರದಲ್ಲಿ 108 ಜಂಕ್ಷನ್ ಗಳಲ್ಲಿ 211 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಅಪರಾಧ ಪ್ರಕರಣಗಳನ್ಬು ಪತ್ತೆ ಹಚ್ಚಲು ಅನುಕೂಲವಾಗಲಿದೆ ಎಂದರು.
ನಗರದ 20ಜಂಕ್ಷನ್ ಗಳಲ್ಲಿ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಗಳು ಕಾರ್ಯ ನಿರ್ವಹಿಸಲಿದ್ದು, ಇವುಗಳು ಕಾನೂನು ಉಲ್ಲಂಘನೆಯ ಸ್ಥಳದ ಬಗ್ಗೆ ಮಾಹಿತಿ ನೀಡುತ್ತವೆ. ಅಲ್ಲದೇ ಶಬ್ದಗಳ ಮೂಲಕ ಮಾಹಿತಿ ನೀಡುತ್ತವೆ. ನಗರದ 5 ಕಡೆ ಸೈನ್ ಬೋರ್ಡ್ ಗಳನ್ನು ಅಳವಡಿಸಿದ್ದು, ವೇಗದ ಮಿತಿ, ತುರ್ತು ಕರೆಗಳ ಸಂಖ್ಯೆ, ಸಂಚಾರಿ ನಿಯಮಗಳು ಹಾಗೂ ರಸ್ತೆಯ ತಿರುವುಗಳ ಬಗ್ಗೆ ಮಾಹಿತಿ ನೀಡಲಿವೆ ಎಂದರು.
ಕಳೆದ 3 ತಿಂಗಳಲ್ಲಿ 29,080 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಮನೆಗೆ ನೋಟಿಸ್ ಕಳುಹಿಸಲಾಗಿದೆ ಎಂದರು. ಸ್ಮಾರ್ಟ್ ಸಿಟಿ ವ್ಯವಸ್ತಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಕಂದಾಯ ಅಧಿಕಾರಿ ಲಕ್ಷ್ಮಿ, ಪಿಆರ್ ಒ ಸುನಿಲ್ ಇದ್ದರು.