Connect with us

Dvgsuddi Kannada | online news portal | Kannada news online

ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಬಿಡುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ

gm siddeshvwara 5

ದಾವಣಗೆರೆ

ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಬಿಡುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ

ದಾವಣಗೆರೆ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ ನಂತರ ಅಯೋಧ್ಯೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಬಿಡುವಂತೆ ಸಂಸದ ಜಿ.ಎಂ.ಸಿದ್ದೇಶ್ವರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಮಂಡಳಿ ಅಧ್ಯಕ್ಷೆ ಜಯವರ್ಮ ಸಿನ್ಹಾರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ. ಮಧ್ಯ ಕರ್ನಾಟಕದಲ್ಲಿರುವ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೆ ಅನಾನುಕೂಲವಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಬೆಂಗಳೂರು ಅಥವಾ ಮೈಸೂರು ಕಡೆಯಿಂದ ಹೊರಡುವ ವಿಶೇಷ ರೈಲುಗಳು ಅರಸೀಕರೆ-ಚಿಕ್ಕಜಾಜೂರು-ದಾವಣಗೆರೆ-ಹರಪನಹಳ್ಳಿ-ಕೊಟ್ಟೂರು ಮೂಲಕ ಹೊಸಪೇಟೆ ತಲುಪಿ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಬಹುದು ಎಂದು ಸಂಸದ ಸಿದ್ದೇಶ್ವರ ರೈಲ್ವೆ ಸಚಿವರ ಗಮನಕ್ಕೆ ತಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top