ದಾವಣಗೆರೆ: ಮಧ್ಯಪ್ರದೇಶ ಮತ್ತು ನವ ದೆಹಲಿ ರಾಜ್ಯದಲ್ಲಿ 30-01-2023 ರಿಂದ 11-02-2023 ರ ವರೆಗೆ ನಡೆಯಲಿರುವ ಖೇಲೋ ಇಂಡಿಯಾ ಯೂತ್‍ಗೇಮ್ಸ್ ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದ ಬಾಲಕಿಯರ ತಂಡವನ್ನು ಆಯ್ಕೆ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯದ ಬಾಲಕಿಯರ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯನ್ನು ಡಿ.28 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರುನಲ್ಲಿರುವ ಶ್ರೀಕಂಠೀರವ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಜಿಲ್ಲೆಯ ಪ್ರತಿಭಾವಂತ ವಾಲಿಬಾಲ್ ಕ್ರೀಡಾಪಟುಗಳು ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಹಿರಿಯ ವಾಲಿಬಾಲ್ ತರಬೇತುದಾರರು ಅಶೋಕ್ ಕೆ.ಸಿ., ಕರ್ನಾಟಕ ಕ್ರೀಡಾ ಪ್ರಾಧಿಕಾರ, ಮೊಬೈಲ್ ಸಂಖ್ಯೆ: 9844123832 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಾಸಂತಿ ಉಪ್ಪಾರ ತಿಳಿಸಿದ್ದಾರೆ.



