ದಾವಣಗೆರೆ: 2022-23ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ರಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
6 ನೇ ರಿಂದ 10 ನೇ ತರಗತಿಯ ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ: https:// sevasin dhuservices.karnataka.gov.in ಮೂಲಕ ಜುಲೈ.31ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08192-237480 ಸಂಪರ್ಕಿಸಬಹುದೆಂದು ಕೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತನ ನೆಲವಿಗಿ ತಿಳಿಸಿದ್ದಾರೆ.



