ದಾವಣಗೆರೆ: ತಾಲ್ಲೂಕು ಶಾಮನೂರು ಗ್ರಾಮದ ಆಂಜನೇಯ ಸ್ವಾಮಿ ರಥೋತ್ಸವ ಮಾ. 21 ರಿಂದ 25 ರವರೆಗೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದು, ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರ ನೀಡಿರುವ ನಿರ್ದೇಶನಕ್ಕೆ ಅನುಗುಣವಾಗಿ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸದೆ, ಸರಳವಾಗಿ ಜರುಗಿಸಬೇಕು ಎಂದು ತಹಸಿಲ್ದಾರ್ ಬಿ.ಎನ್. ಗಿರೀಶ್ ಸೂಚಿಸಿದ್ದಾರೆ.
ಸರ್ಕಾರದ ನಿರ್ದೇಶನದಂತೆ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಧಾರ್ಮಿಕ ಆಚರಣೆಗಳ ಸಮಾರಂಭಗಳಿಗೆ ತೆರೆದ ಪ್ರದೇಶದಲ್ಲಿ 500 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತಿಲ್ಲ. ಈ ಕಾರ್ಯಕ್ರಮ ಸರ್ಕಾರದ ನಿರ್ದೇಶನದನ್ವಯವೇ ಜರುಗಿಸಬೇಕಾಗಿರುತ್ತದೆ. ಹೀಗಾಗಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದೆ, ಸರಳವಾಗಿ ರಥೋತ್ಸವ ನೆರವೇರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು.
ಮಾ. 21 ರಿಂದ 25 ರವರೆಗೆ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಸೇರದಂತೆ ಕ್ರಮವಹಿಸಲು ನಿರ್ದೇಶಿಸಿರುತ್ತಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



