Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಲ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕಟ್ಟನಿಟ್ಟಿನ ಕ್ರಮ ; ಪ್ರತಿ ಶಾಲೆಯಲ್ಲೂ ಸಿಸಿ ಕ್ಯಾಮಾರಾ- ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ

ದಾವಣಗೆರೆ: ಎಸ್ಸೆಲ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕಟ್ಟನಿಟ್ಟಿನ ಕ್ರಮ ; ಪ್ರತಿ ಶಾಲೆಯಲ್ಲೂ ಸಿಸಿ ಕ್ಯಾಮಾರಾ- ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ: ಪರೀಕ್ಷೆ ನಡೆಸುವುದು ಒಂದು ಪವಿತ್ರ ಕೆಲಸವಾಗಿದ್ದು, ಯಾವುದೇ ರೀತಿಯ ಅಕ್ರಮಕ್ಕೆ ಎಡೆ ಮಾಡದೆ, ಕಟ್ಟನಿಟ್ಟಾಗಿ ಹಾಗೂ ಶಾಂತಿಯುತವಾಗಿ ಜಿಲ್ಲೆಯಲ್ಲಿ ಎಸ್ಸೆಲ್ಸೆಲ್ಸಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ದಾವಣಗೆರೆ: ಮಾಗನೂರು ಬಸಪ್ಪ ಪ್ರತಿಷ್ಠಾನದಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅರ್ಥಿಕ ನೆರವು

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜೀವನದಲ್ಲಿ ಎಲ್ಲರಿಗೂ ಶಿಕ್ಷಣ ಅತಿ ಮುಖ್ಯ. ಪೋಷಕರು ಅದನ್ನು ಗಮನದಲ್ಲಿಟ್ಟುಕೊಳ್ಳಬೇಕು. ನಿಮ್ಮ ಮಕ್ಕಳು ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆ ಏರಬೇಕಾದರೆ ಶಿಕ್ಷಣ ಮಾನದಂಡವಾಗಿರುತ್ತದೆ. ಪೋಷಕರು ಮಕ್ಕಳನ್ನು ಶಾಲೆಯಿಂದ ಬಿಡಿಸುವ ಆಲೋಚನೆಯನ್ನು ತೆಗೆದು ಹಾಕಬೇಕು. ಮಕ್ಕಳಿಗೆ ಸದಾ ಪ್ರೋತ್ಸಾಹಿಸುತ್ತಾ ಅವರ ಸಾಧನೆಗೆ ಬೆನ್ನು ತಟ್ಟಬೇಕು ಎಂದರು.

ದಾವಣಗೆರೆ: ಮಾ.1 ರಂದು ಚಿತ್ರದುರ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ಬಿಜೆಪಿ ವೀರಶೈವ ಲಿಂಗಾಯತ ಮುಖಂಡ ಸಭೆ

ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶ ಪಡೆಯುವಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಸವಾಲಿನ ಸಮಯ ಇದಾಗಿರುತ್ತದೆ.ಪರೀಕ್ಷಾ ಕೊಠಡಿಯಲ್ಲಿ ಯಾವುದೇ ಅವಘಾಡವಾಗದಂತೆ ನೋಡಿಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಇನ್ನೂ 28 ದಿನ ಬಾಕಿ ಇದೆ. ಮಾರ್ಚ್ 21 ರಿಂದ ಏಪ್ರಿಲ್ 04 ಪರೀಕ್ಷೆಗಳು ನಡೆಯಲಿವೆ. ಈ ಬಾರಿ ಕಟ್ಟನಿಟ್ಟಾಗಿ ಪರೀಕ್ಷೆ ನಡೆಯಲಿದ್ದು, ಕಾಪಿ ಮಾಡಲು ಯಾವುದೇ ರೀತಿಯ ಅವಕಾಶ ಇರುವುದಿಲ್ಲ. ವಿದ್ಯಾರ್ಥಿಗಳು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಲು ಸಿದ್ದರಾಗಬೇಕು. ಅಂಕಗಳ ಬೆನ್ನತ್ತುವುದರೊಂದಿಗೆ ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತೀರಿ, ಆತ್ಮಸ್ಥೆರ್ಯದಿಂದ ಮಕ್ಕಳು ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಕಿವಿಮಾತು ಹೇಳಿದರು.

ಪರೀಕ್ಷಾ ಸಿಬ್ಬಂದಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಂಕಗಳಿಗಿಂತ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸಬೇಕು. ಹಿಜಾಬ್ ಸಂಬಂಧ ಸರ್ಕಾರದ ಸುತ್ತೋಲೇಯನ್ನು ಅನುಸರಿಸಬೇಕು. ಪ್ರತಿ ಶಾಲೆಯಲ್ಲೂ ಸಿಸಿ ಕ್ಯಾಮಾರಾ ಅಳವಡಿಸಬೇಕು. ಸಿಬ್ಬಂದಿಗಳು ಕೂಡ ಪರೀಕ್ಷಾ ಕೊಠಡಿಗಳಿಗೆ ಮೊಬೈಲ್ ತೆಗೆದುಕೊಂಡು ಹೋಗುವ ಆಗಿಲ್ಲ. ಕೊಠಡಿಗಳಲ್ಲಿ ಗಡಿಯಾರಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಒಳಗಡೆ ಕಾಣುವಂತ ನೀರಿನ ಬಾಟೆಲ್‌ಗಳನ್ನು ತೆಗೆದುಕೊಂಡು ಬರಲು ಮಾತ್ರ ಅವಕಾಶ ಕೊಡಬೇಕು. ಕೊಠಡಿಯಲ್ಲಿ ನೀರು, ಬೆಳಕಿನ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು ಎಂದರು.

ಪರೀಕ್ಷೆ ಜಿಲ್ಲೆಯ 22579 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಅತಿಯಾದ ಆತ್ಮವಿಶ್ವಾಸ ಬೇಡ, ಪರೀಕ್ಷೆಗಳ ಆರಂಭದಿಂದ ಅಂತ್ಯದವರೆಗೂ ಎಲ್ಲಾ ಅಧಿಕಾರಿಗಳು ಎಚ್ಚರ ವಹಿಸಬೇಕು. ಈ ಹಿಂದಿನ ಎಲ್ಲಾ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿದ ಹೆಗ್ಗಳಿಕೆ ನಮ್ಮ ಜಿಲ್ಲೆಗಿದೆ. ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆ ಸುವ್ಯವಸ್ಥೆ ನಡೆಯುವಂತೆ ನೋಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹಲವಾರು ಮಾರ್ಪಾಡುಗಳಾಗುತಿದ್ದು ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಘೋಷಣೆ ಜಾರಿ ಮಾಡಲಾಗುವುದು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಅಂತರದಲ್ಲಿರುವ ಝರಾಕ್ಸ್ ಅಂಗಡಿಗಳನ್ನು ತೆರಯುವಂತಿಲ್ಲ. ಜಿಲ್ಲಾ ಹಂತದಲ್ಲಿ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಿ, ಪರೀಕ್ಷಾ ಕೇಂದ್ರಗಳ ಸುತ್ತಲೂ ಪೊಲೀಸರನ್ನು ನೇಮಕಗೊಳಿಸಲಾಗುತ್ತದೆ ಎಂದು ಅವರು ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ, ಮಾಹಿತಿಗಳನ್ನು ಯಾರೂ ಕೂಡ ಪ್ರಕಟಿಸಬಾರದು. ಒಂದು ವೇಳೆ ಪ್ರಕಟಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೇಲೆ ಸೈಬರ್ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದರು.

ಡಿ.ಡಿಪಿ.ಐ ಕೊಟ್ರೇಶ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 22579 ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದು, ಒಟ್ಟು 81 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಪರೀಕ್ಷೆ ನಡೆಯಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಎಲ್ಲಾ ಮುಂಜಾಗೃತ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಡಯಟ್ ಪ್ರಾಂಶುಪಾಲರಾದ ಗೀತಾ, ಡಿಡಿಪಿಯು ಕರಿಬಸಪ್ಪ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top