Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ

ದಾವಣಗೆರೆ: ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ: ಇಂದಿನಿಂದ (ಮಾರ್ಚ್ 31) ರಏಪ್ರಿಲ್ 15 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನ೦ದ ಕಪಾಶಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ 89 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಹಿನ್ನಲೆಯಲ್ಲಿ ಪರೀಕ್ಷಾ ದಿನಗಳಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200‌ ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ
ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್‌ ಕೆಫೆ ಮತ್ತು ಕಂಪ್ಯೂಟರ್ ಅ೦ಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಆದೇಶ ಹೊರಡಿಸಿದ್ದಾರೆ.

ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬ೦ದಿಗೆ ಅನ್ವಯಿಸುವುದಿಲ್ಲ. ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಬಿಡಲು ಬರುವ ಪೋಷಕರು ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನು ಪಾರ್ಕಿ೦ಗ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top