ದಾವಣಗೆರೆ; ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೋತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.



