ಶಿವಮೊಗ್ಗ: ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡ ಮೇಲಿಂದ ಹಾರಿ ದಾವಣಗೆರೆ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ.
ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿಯಾಗಿದ್ದಾರೆ. ಕಾಲೇಜಿನ ಹಾಸ್ಟೆಲ್ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ಸಂದರ್ಭದಲ್ಲ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೇಘಶ್ರೀ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.