ದಾವಣಗೆರೆ: ನಗರದ ಹದಡಿ ರಸ್ತೆಯ ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್ ಜಾಗವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೀಡಲು ಸರ್ಕಾರ ನಿರ್ಧಾರ ವಿರೋಧಿಸಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಯಾವುದೇ ಕಾರಣಕ್ಕೂ ಪಾಲಿಟೆಕ್ನಿಕ್‌ಗೆ ಸಂಬಂಧಪಟ್ಟ ಜಾಗವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಸ್ತಾಂತರ ಮಾಡಬಾರದು ಎಂದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಆಗ್ರಹಿಸಿದರು. ಈಗ ಸರ್ಕಾರ ಪ್ರಥಮ ದರ್ಜೆ ಕಾಲೇಜಿಗೆ ಕೊಟ್ಟಿರುವ ಸ್ಥಳದಲ್ಲಿ ಡಿ.ಆರ್.ಆರ್ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವರ್ಕ್ ಶಾಪ್, ವಿದ್ಯಾರ್ಥಿನಿಲಯ ಹಾಗೂ ಆಟದ ಮೈದಾನವಿದೆ. ಇಲ್ಲಿವಪಾಲಿಟೆಕ್ನಿಕ್ ಪ್ರಾಚಾರ್ಯರ ಗಮನಕ್ಕೆ ಬಾರದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿ.ಆರ್.ಆರ್ ಪಾಲಿಟೆಕ್ನಿಕ್ ಸಂಸ್ಥೆಯ 3 ಹೆಕ್ಟೇರ್ ಜಮೀನನ್ನು ಸರ್ಕಾರಿ ಕಾಲೇಜಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಕ್ರಮ ಸರಿಯಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು, ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ ಪ್ರಥಮ ದರ್ಜೆ ಕಾಲೇಜಿನವರಿಗೆ ಬೇರೆ ಕಡೆ ಜಾಗ ನೀಡಬೇಕು. ಇಲ್ಲವಾದಲ್ಲಿ ಮುಷ್ಕರ ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದರು.