ದಾವಣಗೆರೆ: ನಗರದ ಜೆಎಚ್ ಪಟೇಲ್ ಬಡಾವಣೆ ವಿದ್ಯಾರ್ಥಿನಿಲಯದ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ನಗರದ ತಾಲ್ಲೂಕು ಸಮಾಜ ಕಲ್ಯಾಣ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ ನಲ್ಲಿ ಸರಿಯಾದ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು. ನೀರಲ್ಲಿ ಹುಳು ಬಿದ್ದಿದೆ ಎಂದ್ರೆ ಚಿಕನ್,ಮಟನ್ ತಿಂತೀರಾ ಹುಳು ಯಾವ ಲೆಕ್ಕ ಎಂದು ವಾರ್ಡನ್ ಹೇಳ್ತಾರೆ. ಇದಲ್ಲದೆ, ವಿದ್ಯಾರ್ಥಿನಿಯರ ನಡತೆ ಬಗ್ಗೆ ಕೆಟ್ಟದಾಗಿ ಮಾತಾಡ್ತಾರೆಂದು ವಾರ್ಡನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೂರು ತಿಂಗಳಿಂದ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಕೂಡ ಸರಿಯಿಲ್ಲ ಎಂದು ದೂರು ನೀಡಿದರು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹೀಗಾಗಿ ವಾರ್ಡನ್ ಮೇಲೆ ಕ್ರಮ ಕೈಗೊಂಡು, ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ವಿದ್ಯಾರಗಥಿಗಳು ಆಗ್ರಹಿಸಿದರು.



