Connect with us

Dvgsuddi Kannada | online news portal | Kannada news online

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ, ವಸತಿ ಸಹಾಯ ಯೋಜನೆಗೆ ಅರ್ಜಿ ಸಲ್ಲಿಸಲು ಮಾ.15 ಕೊನೆ ದಿನ

ದಾವಣಗೆರೆ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ, ವಸತಿ ಸಹಾಯ ಯೋಜನೆಗೆ ಅರ್ಜಿ ಸಲ್ಲಿಸಲು ಮಾ.15 ಕೊನೆ ದಿನ

ದಾವಣಗೆರೆ: ಪ್ರಸಕ್ತ (2022-23) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ’ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ವಿಳಾಸ: https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in, ದೂರವಾಣಿ ಸಂಖ್ಯೆ:080-35254757 ನ್ನು ಸಂಪರ್ಕಿಸಬಹುದು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top