ದಾವಣಗೆರೆ: ಕೌಟುಂಬಿಕ ಆಸ್ತಿ ವಿವಾದ ಹಾಗೂ ಕೃಷಿ ಇಲಾಖೆಯಲ್ಲಿ ಮಾಡಿದ ಕಾಮಗಾರಿಗೆ ಬಿಲ್ ಮಂಜೂರಾಗಿಲ್ಲ ಎಂದು ಆರೋಪ ಮಾಡಿ ದಾವಣಗೆರೆ ಮೂಲದ ಗುತ್ತಿಗೆದಾರ ಪಿ ಎಸ್ ಗೌಡರ್ (48)ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಪಿ ಎಸ್ ಗೌಡರ್ ಅವರು ಕಳೆದ ವರ್ಷ ಫೆಬ್ರವರಿಯಲ್ಲಿ ಸಂತೆಬೆನ್ನೂರಿನ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೆಲವು ಕೆಲಸಗಳನ್ನು ಪೂರ್ಣಗೊಳಿಸಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಇನ್ನೂ ಬಿಲ್‌ಗಳನ್ನು ಕ್ಲಿಯರ್ ಮಾಡಿರಲಿಲ್ಲ. ಆದ್ದರಿಂದ ಈ ಎಲ್ಲಾ ಒತ್ತಡಗಳು ತನ್ನನ್ನು ಇಂತಹ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದೆ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.
ಆತನ ಪತ್ನಿ ವಸಂತ ಕುಮಾರಿ ನೀಡಿದ ದೂರಿನ ಮೇರೆಗೆ ಪೊಲೀಸರು ಆತನ ಸಹೋದರರು ಮತ್ತು ಕೆಆರ್‌ಐಡಿಎಲ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಗುತ್ತಿಗೆದಾರ ಪಿ ಎಸ್ ಗೌಡರ್ ಅವರ ಡೆತ್ ನೋಟ್‌ನಲ್ಲಿ, ತನ್ನ ಸಾವಿಗೆ ಅಣ್ಣ ಜಿ ಎಸ್ ನಾಗರಾಜ್, ಕಿರಿಯ ಸಹೋದರ ಗೌಡರ್ ಶ್ರೀನಿವಾಸ್ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್, (ಕೆಆರ್‌ಐಡಿಎಲ್) ದಾವಣಗೆರೆ ಕಾರಣ ಎಂದು ಆರೋಪಿಸಿದ್ದಾರೆ. ಡೆತ್ ನೋಟ್‌ನಲ್ಲಿರುವ ಈ ವಿಷಯಗಳು ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಹಿರಿಯ ಸಹೋದರ ತನಗೆ ಆರ್ಥಿಕ ಹಾಗೂ ಮಾನಸಿಕ ಒತ್ತಡ ಹಾಕುತ್ತಿದ್ದಾರೆ. ಪೂರ್ವಜರ ಆಸ್ತಿಯನ್ನು ಬಿಟ್ಟುಕೊಡಲು ಸಿದ್ಧರಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.



