Connect with us

Dvgsuddi Kannada | online news portal | Kannada news online

ದಾವಣಗೆರೆ: ಹೋಟೆಲ್, ರೆಸಾರ್ಟ್ ಗಳ ಆಸ್ತಿ ತೆರಿಗೆಯ ಶೇ.50ರಷ್ಟು ರಿಯಾಯಿತಿಗೆ ಈಗಲೇ ನೋಂದಾಯಿಸಿ

ದಾವಣಗೆರೆ

ದಾವಣಗೆರೆ: ಹೋಟೆಲ್, ರೆಸಾರ್ಟ್ ಗಳ ಆಸ್ತಿ ತೆರಿಗೆಯ ಶೇ.50ರಷ್ಟು ರಿಯಾಯಿತಿಗೆ ಈಗಲೇ ನೋಂದಾಯಿಸಿ

ದಾವಣಗೆರೆ: ಕೋವಿಡ್-19 ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ 2021-22ನೇ ಸಾಲಿನ ಹಣಕಾಸು ವರ್ಷದಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 50 ರಷ್ಟು ರಿಯಾಯಿತಿ ಹಾಗೂ 3 ತಿಂಗಳ ವಿದ್ಯುಚ್ಛಕ್ತಿ ಡಿಮ್ಯಾಂಡ್/ ಫಿಕ್ಸೆಡ್ ಡೆಪಾಸಿಟ್ ಮನ್ನಾ ಸೌಲಭ್ಯವನ್ನು ಸರ್ಕಾರದಿಂದ ಘೋಷಿಸಲಾಗಿದ್ದು, ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯು ಸೂಚನೆ ನೀಡಿದೆ.

ಸರ್ಕಾರಿ ಘೋಷಿಸಿರುವ ರಿಯಾಯಿತಿ ಸೌಲಭ್ಯ ಪಡೆಯಲು, ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದಿರುವ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್‍ಗಳ ಉದ್ದಿಮೆದಾರರು, ಟೂರ್ಸ್ ಅಂಡ್ ಟ್ರಾವೆಲ್ಸ್ ಆಪರೇಟರ್ಸ್‍ಗಳು, ಕೆಟಿಟಿಎಫ್ (ಕರ್ನಾಟಕ ಟೂರಿಸಂ ಟ್ರೇಡ್ ಫೆಸಿಲಿಟೇಶನ್) ಆ್ಯಕ್ಟ್ ನ ಪ್ರಕರಣ ಸಂಖ್ಯೆ 8/1 ಅನ್ವಯ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟhttps://kttf.karnatakatourism.org ನಲ್ಲಿ ಕಡ್ಡಾಯವಾಗಿ ನೊಂದಾಯಿಸಿ ಪ್ರಮಾಣ ಪತ್ರವನ್ನು ಪಡೆಯಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರೈಲ್ವೆ ನಿಲ್ದಾಣ ಪಕ್ಕ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ದಾವಣಗೆರೆ, ದೂರವಾಣಿ ಸಂಖ್ಯೆ; 08192-230123 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top