ದಾವಣಗೆರೆ: 2013-14 ರಿಂದ 2016-17 ರ ಸಾಲಿನಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಾಕಿ ಉಳಿದ ಪರಿಶಿಷ್ಟ ಪಂಗಡದ 08 ಅಭ್ಯರ್ಥಿಗಳು ಸೇರಿದಂತೆ ಒಟ್ಟು 15 ಅಭ್ಯರ್ಥಿಗಳಿಗೆ ತಲಾ 02 ಲಕ್ಷ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಸಾಲ ಸೌಲಭ್ಯ ನೀಡುವ ಸಂಬಂಧ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಬಗ್ಗೆ ಆಕ್ಷೇಪಣೆಗಳು ಏನಾದರು ಇದ್ದಲ್ಲಿ 15 ದಿನದೊಳಗಾಗಿ ದಾಖಲೆಗಳೊಂದಿಗೆ ದಾವಣಗೆರೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



