ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 2023 -24ನೇ ಸಾಲಿನಲ್ಲಿ ಪ್ರಾರಂಭವಾಗಲಿರುವ ಪದವಿ ಪೂರ್ವ ಕಾಲೇಜಿಗೆ ತಾತ್ಕಲಿಕವಾಗಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿಗಳ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕನ್ನಡ, ಇಂಗ್ಲೀಷ್, ಉರ್ದು, ಭಾಷೆ ಭೌತಶಾಸ್ತ್ರ ರಸಾಯನಶಾಸ್ತ್ರ ಗಣಿತ ಹಾಗೂ ಜೀವಶಾಸ್ತ್ರ ವಿಷಯದಲ್ಲಿ ಬೋಧಿಸಲು ಅರ್ಹರಾಗಿರಬೇಕು, ಅರ್ಜಿಗಳನ್ನು ಮಾ. 18ರೊಳಗೆ ಪ್ರಾಂಶುಪಾಲರು, ಎ.ಪಿ.ಜೆ ಅಬ್ದುಲ್ ಕಲಾಂ ವಸತಿಶಾಲೆ, ಕೊಂಡಜ್ಜಿ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ:9008815296ಗೆ ಸಂಪರ್ಕಿಸಬಹುದು ಎಂದು ಇಲಾಖೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.



