ದಾವಣಗೆರೆ: ಮೇ.21, 22ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ; ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯಲ್ಲಿ ಮೇ.21 ಮತ್ತು 22 ರಂದು ಜರಗುವ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 600 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿದ್ದು, ಕೋವಿಡ್ ನಿಯಾಮನುಸಾರ ಪರೀಕ್ಷಾ ಅಭ್ಯರ್ಥಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮಾಡಿ ಉಚಿತ ಮಾಸ್ಕ್ ನೀಡಿ ಪರೀಕ್ಷೆ ನಡೆಸಲಾಗುವುದು ಎಂದರು.

ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಿಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರು ಹಾಗೂ ಅಭ್ಯರ್ಥಿಗಳು ಮೊಬೈಲ್, ಶೂ, ಎಲೆಕ್ಟ್ರಾನಿಕ್ ವಾಚ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸುವುದು. ಜಾಮಿಟ್ರಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿಸಲಾಗುವು. ಒಂದು ವೇಳೆ ತಂದಿರುವುದು ಕಂಡುಬಂದಲ್ಲಿ ತಕ್ಷಣವೇ ಅವರನ್ನು ಪರೀಕ್ಷೆಯಿಂದ ಅಮಾನತು ಮಾಡಲಾಗುವುದು. ಜಿಲ್ಲೆಯಲ್ಲಿ ಈವರೆಗೆ ಎಲ್ಲಾ ಪರೀಕ್ಷೆಗಳು ಸುಗಮವಾಗಿ ನಡೆದಿವೆ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಯಾವುದೇ ರೀತಿಯ ಲೋಪ ಬರದಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಇ.ಎನ್.ಟಿ ಸ್ಪೆಷಲಿಸ್ಟ್ ಗಳನ್ನು ನೇಮಿಸಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು ಪರೀಕ್ಷಾರ್ಥಿಗಳ ಸಂಬಂಧಿಗಳು ಸಂಬಂಧಿತ ಕಾರ್ಯಗಳಲ್ಲಿ ಭಾಗವಹಿಸುವಂತಿಲ್ಲ ಎಂದರು.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ, ಇತ್ತೀಚಿಗೆ ಪಿ.ಎಸ್.ಐ ನೇಮಕದಲ್ಲಿ ಸಾಕಷ್ಟು ಅಕ್ರಮಗಳು ಕಂಡುಬಂದಿರುವುದರಿಂದ ಜಿಲ್ಲೆಯಲ್ಲಿ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಒಬ್ಬ ಅಭ್ಯರ್ಥಿ ಅಕ್ರಮ ನಡೆಯುವಂತ ಒಂದು ಸಣ್ಣ ಸಂದೇಹ ಕಂಡುಬಂದರೂ ಸಹ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ನಡೆಯಬಹುದಾದ ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಂಖ್ಯೆ:08192-257778 ಸಂಪರ್ಕಿಸಬಹುದು. ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎ ಚನ್ನಪ್ಪ. ಡಿಯುಡಿಸಿ ಅಧಿಕಾರಿ ನಜ್ಮಾ, ಡಿಡಿಪಿಐ ತಿಪ್ಪೇಶಪ್ಪ, ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿಗಳು ಸೇರಿದಂತೆ ಹಲವಾರು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *