ದಾವಣಗೆರೆ: ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಅನುದಾನಿತ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷೆ ಶಿಕ್ಷಕ ಹುದ್ದೆಗೆ ಬಿ.ಎ, ಬಿ.ಇಡಿ (ಹಿಂದಿ ಭಾಷೆ ಐಚ್ಚಿಕ ವಿಷಯ) ವಿದ್ಯಾರ್ಹತೆಯುಳ್ಳ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಆಸಕ್ತರು ದಿನಾಂಕ ಆಗಷ್ಟ್ 30 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182 220925 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.